ದಾನಿಯೇಲ 3:17 - ಕನ್ನಡ ಸತ್ಯವೇದವು J.V. (BSI)17 ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು. ಅಧ್ಯಾಯವನ್ನು ನೋಡಿ |