Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:23 - ಕನ್ನಡ ಸತ್ಯವೇದವು J.V. (BSI)

23 ಶದ್ರಕ್ ಮೇಶಕ್ ಅಬೇದ್‍ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಆವಿಗೆಯ ಮಧ್ಯದಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅತ್ತ ಶದ್ರಕ್, ಮೇಶಕ್, ಅಬೇದ್‍ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯಲ್ಲಿ ಬಿದ್ದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:23
13 ತಿಳಿವುಗಳ ಹೋಲಿಕೆ  

ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್‍ನೆಗೋ ಎಂಬ ಹೆಸರಿಟ್ಟನು.


ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು ತಟ್ಟನೆದ್ದು ತನ್ನ ಮಂತ್ರಿಗಳನ್ನು - ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ ಎಂದು ಕೇಳಲು ಅವರು ರಾಜನಿಗೆ - ಅರಸೇ, ಹೌದು, ಸತ್ಯ ಎಂದುತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು