ದಾನಿಯೇಲ 3:26 - ಕನ್ನಡ ಸತ್ಯವೇದವು J.V. (BSI)26 ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು. ಅಧ್ಯಾಯವನ್ನು ನೋಡಿ |