Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:6 - ಕನ್ನಡ ಸತ್ಯವೇದವು J.V. (BSI)

6 ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವನು ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:6
20 ತಿಳಿವುಗಳ ಹೋಲಿಕೆ  

ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.


ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ - ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;


ನೀನು ನನಗೆ ಸಾಷ್ಟಾಂಗನಮಸ್ಕಾರ ಮಾಡಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು ಅಂದನು.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.


ಅದರಂತೆ ಶಲ್ಯ ಇಜಾರು ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ - ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ಚೂರುಚೂರಾಗಿ ಕಡಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಸಿಬಿಡುವೆನು;


ಉಳಿದ ಭಾಗವನ್ನು ತನ್ನ ದೇವರನ್ನಾಗಿ ಬೊಂಬೆ ಕೆತ್ತಿ ಅದಕ್ಕೆ ಎರಗಿ ಅಡ್ಡಬಿದ್ದು - ನೀನೇ ನನ್ನ ದೇವರು, ನನ್ನನ್ನು ರಕ್ಷಿಸು ಎಂದು ಪ್ರಾರ್ಥಿಸುವನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.


ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು