Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:11 - ಕನ್ನಡ ಸತ್ಯವೇದವು J.V. (BSI)

11 ಆ ವೃಕ್ಷವು ಬೆಳೆದು ಬಲಗೊಂಡಿತ್ತು. ಅದರ ತುದಿಯು ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಮರ ಬೆಳೆದು ಬಲಗೊಂಡಿತ್ತು. ಅದರ ತುದಿ ಆಕಾಶವನ್ನು ಮುಟ್ಟುತ್ತಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:11
6 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.


ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು