Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:12 - ಕನ್ನಡ ಸತ್ಯವೇದವು J.V. (BSI)

12 ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಅದರಿಂದ ಎಲ್ಲಕ್ಕೂ ಆಹಾರ, ನೆರಳು ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದರ ಎಲೆಗಳು ಚೆಲುವಾಗಿದ್ದವು. ಅದು ಹಣ್ಣುಗಳಿಂದ ತುಂಬಿತ್ತು. ಅದರಿಂದ ಎಲ್ಲಕ್ಕೂ ಆಹಾರ, ವನ್ಯಮೃಗಗಳಿಗೆ ಅದರ ನೆರಳಿನಲ್ಲಿ ಆಶ್ರಯ, ಆಕಾಶದ ಪಕ್ಷಿಗಳಿಗೆ ಅದರ ಕೊಂಬೆಗಳಲ್ಲಿ ನೆಲೆ, ಎಲ್ಲಾ ಪ್ರಾಣಿಗಳಿಗೂ ಅದರಿಂದ ಪೋಷಣೆ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:12
13 ತಿಳಿವುಗಳ ಹೋಲಿಕೆ  

ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.


ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.


ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡ ದೊಡ್ಡ ಕೊಂಬೆಗಳನ್ನು ಬಿಡುವದರಿಂದ ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅದರ ನೆರಳಿನಲ್ಲಿ ವಾಸಮಾಡುವದಕ್ಕಾಗುತ್ತದೆ ಅಂದನು.


ಇದಲ್ಲದೆ ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು ಖಡ್ಗಹತರ ಜೊತೆಗೆ ಸೇರಿದರು.


ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!


ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.


ಕಡಿದ ಮರವೂ ತಾನು ಮೊಳೆಯುವದನ್ನು ನಿಲ್ಲಿಸದೆ ಮತ್ತೆ ಚಿಗುರೇನೆಂದು ನಿರೀಕ್ಷಿಸುತ್ತದಲ್ಲವೇ!


ನೀರಿನ ವಾಸನೆಯಿಂದಲೇ ಅದು ಮೊಳೆತು ಗಿಡದ ಹಾಗೆ ಕವಲೊಡೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು