Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:16 - ಕನ್ನಡ ಸತ್ಯವೇದವು J.V. (BSI)

16 ಅದಕ್ಕೆ ಮಾನುಷಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರುಷ ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಏಳುವರ್ಷ ಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:16
13 ತಿಳಿವುಗಳ ಹೋಲಿಕೆ  

ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಅವು ನಾಶವಾಗುವವು, ಆದರೆ ನೀನು ಶಾಶ್ವತವಾಗಿರುತ್ತೀ; ಅವೆಲ್ಲವೂ ವಸ್ತ್ರದಂತೆ ಹಳೇವಾಗುವವು,


ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹುವರುಷಗಳ ಕಾಲವಾದ ನಂತರ ಮಹಾಸೈನ್ಯದಿಂದಲೂ ಅಧಿಕಸನ್ನಾಹದಿಂದಲೂ ಸಮೇತನಾಗಿ ಬರುವನು.


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಲು ಅವನು - ನನ್ನ ಒಡೆಯನಾದ ಅರಸನ ಶತ್ರುಗಳಿಗೂ ಅವನಿಗೆ ಕೇಡು ಮಾಡುವದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ ಎಂದು ಉತ್ತರಕೊಟ್ಟನು.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು