Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:2 - ಕನ್ನಡ ಸತ್ಯವೇದವು J.V. (BSI)

2 ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹೋನ್ನತನಾದ ದೇವರು ನನಗೋಸ್ಕರ ಮಾಡಿದ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ನಿಮಗೆ ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:2
19 ತಿಳಿವುಗಳ ಹೋಲಿಕೆ  

ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ಯೇಸು ಅವನಿಗೆ - ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದಿದ್ದರೆ ನಂಬುವದೇ ಇಲ್ಲವೆಂದು ಹೇಳಿದನು.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ರಾಜನೇ, ಇದರ ತಾತ್ಪರ್ಯವೇನಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನ ತೀರ್ಪು ಹೀಗಿದೆ -


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ ದರ್ಶನಗಳ ಮೂಲಕ ಭಯಪಡಿಸುವಿ.


ನೀನು ನಮ್ಮ ದೇಶವನ್ನು ಕಟಾಕ್ಷಿಸಿ ಅದರ ಮೇಲೆ ಮಳೆಸುರಿಸಿ ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂವಿುಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.


ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು