Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:21 - ಕನ್ನಡ ಸತ್ಯವೇದವು J.V. (BSI)

21 ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ ಆ ವೃಕ್ಷವು ನೀನೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಲೋಕದ ಜನರೆಲ್ಲರಿಗೆ ಕಾಣಿಸುತ್ತಿತ್ತು. ಅಂದವಾದ ಎಲೆಗಳನ್ನೂ ಹುಲುಸಾದ ಹಣ್ಣುಗಳನ್ನೂ ಬಿಡುತ್ತಿತ್ತು. ಎಲ್ಲಕ್ಕೂ ಆಹಾರ ಒದಗಿಸುತ್ತಿತ್ತು. ತನ್ನ ನೆರಳನ್ನು ವನ್ಯಮೃಗಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡಿತ್ತು. ಕನಸಿನಲ್ಲಿ ನಿಮಗೆ ತೋರಿದ ಆ ಮರವು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:21
8 ತಿಳಿವುಗಳ ಹೋಲಿಕೆ  

ಎಲ್ಲಾ ಆಕಾಶಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಮಾಡಿಕೊಂಡಿದ್ದವು; ಸಮಸ್ತಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳನ್ನು ಈಯುತ್ತಿದ್ದವು; ಮಹಾಜನಾಂಗಗಳೆಲ್ಲಾ ಅದರ ನೆರಳನ್ನು ಆಶ್ರಯಿಸಿದ್ದವು.


ನರಜಾತಿಯವರು ವಾಸಿಸುವ ಸಕಲ ಪ್ರಾಂತಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ.


ಆ ವೃಕ್ಷವು ಬೆಳೆದು ಬಲಗೊಂಡಿತ್ತು. ಅದರ ತುದಿಯು ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶಕ್ಕೆ ತುದಿಯನ್ನು ಮುಟ್ಟಿಸುತ್ತಾ ಲೋಕದವರೆಲ್ಲರಿಗೂ ಕಾಣಿಸುತ್ತಾ


ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.


ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು