ದಾನಿಯೇಲ 4:22 - ಕನ್ನಡ ಸತ್ಯವೇದವು J.V. (BSI)22 ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು. ಅಧ್ಯಾಯವನ್ನು ನೋಡಿ |