ದಾನಿಯೇಲ 4:25 - ಕನ್ನಡ ಸತ್ಯವೇದವು J.V. (BSI)25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು. ಅಧ್ಯಾಯವನ್ನು ನೋಡಿ |