Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:30 - ಕನ್ನಡ ಸತ್ಯವೇದವು J.V. (BSI)

30 ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:30
33 ತಿಳಿವುಗಳ ಹೋಲಿಕೆ  

ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆ ಕೊಚ್ಚುತ್ತಾರೆ.


ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಪಶುಗಳಂತೆಯೇ ಇಲ್ಲವಾಗುತ್ತಾನೆ.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ಕೃಷ್ಟನು; ಪ್ರಭಾವಮಹತ್ವಗಳಿಂದ ಭೂಷಿತನಾಗಿದ್ದೀ.


ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.


ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ - ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;


ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ; ದೀನರಲ್ಲಿ ಜ್ಞಾನ.


ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು