ದಾನಿಯೇಲ 4:32 - ಕನ್ನಡ ಸತ್ಯವೇದವು J.V. (BSI)32 ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ. ಅಧ್ಯಾಯವನ್ನು ನೋಡಿ |