Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:5 - ಕನ್ನಡ ಸತ್ಯವೇದವು J.V. (BSI)

5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:5
15 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.


ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!


ಎರಡು ವರುಷಗಳಾದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸು ಏನಂದರೆ - ಅವನು ನೈಲ್‍ನದೀತೀರದಲ್ಲಿ ನಿಂತಿದ್ದನು.


ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ - ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್‍ನೆಗೋ ಎಂಬ ಹೆಸರಿಟ್ಟನು.


ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂವಿುಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ;


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು