Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರತರುವ ಹಾಗೆ ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:6
10 ತಿಳಿವುಗಳ ಹೋಲಿಕೆ  

ಅವನಿಗೆ ನಿದ್ರೆ ತಪ್ಪಿತು. ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿಸಲೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರಿಸಿದಾಗ ಆ ಜೋಯಿಸರೂ ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು.


ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂವಿುಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ;


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು