Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:7 - ಕನ್ನಡ ಸತ್ಯವೇದವು J.V. (BSI)

7 ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ಇವರು ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಂತ್ರವಾದಿಗಳು, ಜೋಯಿಸರು ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅರ್ಥವನ್ನು ತಿಳಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:7
16 ತಿಳಿವುಗಳ ಹೋಲಿಕೆ  

ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು ಎಂಬ ಉತ್ತರವನ್ನೇ ಪುನಃ ಕೊಟ್ಟರು.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು;


ಆಗ ಆ ಪಂಡಿತರು ಸನ್ನಿಧಿಯ ಮುಂದೆ - ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾವನೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸನನ್ನಾಗಲಿ ಮಾಟಗಾರನನ್ನಾಗಲಿ ಪಂಡಿತನನ್ನಾಗಲಿ ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ;


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.


ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಆಸ್ಥಾನ ವಿದ್ವಾಂಸರೆಲ್ಲರು ಬಂದು ನೋಡಿದರು. ಆದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು.


ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು