Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:1 - ಕನ್ನಡ ಸತ್ಯವೇದವು J.V. (BSI)

1 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:1
11 ತಿಳಿವುಗಳ ಹೋಲಿಕೆ  

ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.


ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಯೆಹೋವನು ಇಂತೆನ್ನುತ್ತಾನೆ - ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು