Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:22 - ಕನ್ನಡ ಸತ್ಯವೇದವು J.V. (BSI)

22 ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಬೇಲ್ಶಚ್ಚರರೇ, ಅವರ ಕುಮಾರರಾದ ತಾವು ಇದನ್ನೆಲ್ಲ ತಿಳಿದುಕೊಂಡಿದ್ದರೂ ದೀನ ಮನಸ್ಕರಾಗದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಬೇಲ್ಶಚ್ಚರನೇ, ಇವುಗಳೆಲ್ಲ ನಿನಗೆ ತಿಳಿದೇ ಇವೆ. ನೀನು ನೆಬೂಕದ್ನೆಚ್ಚರನ ಮಗ. ಆದರೂ ನೀನು ನಮ್ರತೆಯಿಂದ ವರ್ತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:22
17 ತಿಳಿವುಗಳ ಹೋಲಿಕೆ  

ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನು ಪಾಪಕ್ಕೊಳಗಾಗಿದ್ದಾನೆ.


ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಯೆಹೋವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.


ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.


ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು