Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:23 - ಕನ್ನಡ ಸತ್ಯವೇದವು J.V. (BSI)

23 ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:23
47 ತಿಳಿವುಗಳ ಹೋಲಿಕೆ  

ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದು ಅಂದುಕೊಳ್ಳುತ್ತಿದ್ದೆನು.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ನಾನು ನಡೆಯುವದನ್ನೂ ಮಲಗುವದನ್ನೂ ಶೋಧಿಸಿ ಗ್ರಹಿಸಿಕೊಳ್ಳುತ್ತೀ; ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.


ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ;


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು.


ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು.


ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಕೊಳ್ಳಲು ಅವು ಸತ್ತು ತಿರಿಗಿ ಮಣ್ಣಿಗೆ ಸೇರುತ್ತವೆ.


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಕೂಡಿಬಂದರು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು