ದಾನಿಯೇಲ 5:6 - ಕನ್ನಡ ಸತ್ಯವೇದವು J.V. (BSI)6 ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!