Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:8 - ಕನ್ನಡ ಸತ್ಯವೇದವು J.V. (BSI)

8 ಆಸ್ಥಾನ ವಿದ್ವಾಂಸರೆಲ್ಲರು ಬಂದು ನೋಡಿದರು. ಆದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಸ್ಥಾನದ ವಿದ್ವಾಂಸರೆಲ್ಲರೂ ಬಂದು ನೋಡಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ ಅದರ ಅರ್ಥವನ್ನು ತಿಳಿದುಕೊಳ್ಳುವುದಕ್ಕಾಗಲಿ ಅವರಿಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:8
9 ತಿಳಿವುಗಳ ಹೋಲಿಕೆ  

ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ - ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು;


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ಇವರು ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ಯೆಹೋವನು ಇಂತೆನ್ನುತ್ತಾನೆ - ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.


ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸೊಂಪಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು