Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:12 - ಕನ್ನಡ ಸತ್ಯವೇದವು J.V. (BSI)

12 ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ - ರಾಜನೇ, ಯಾವನಾದರೂ ಮೂವತ್ತು ದಿನಗಳ ತನಕ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದಿಯಲ್ಲಾ ಎಂದು ಕೇಳಲು ರಾಜನು - ಹೌದು, ಮೇದ್ಯಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೆಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವಿಯಲ್ಲವೆ?” ಎಂದು ಕೇಳಿದರು. ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:12
7 ತಿಳಿವುಗಳ ಹೋಲಿಕೆ  

ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು


ಅರಸನು ಸಮ್ಮತಿಸುವದಾದರೆ ವಷ್ಟಿಯು ತಿರಿಗಿ ಅಹಷ್ವೇರೋಷ್‍ರಾಜನ ಸನ್ನಿಧಿಗೆ ಬರಲೇಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.


ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.


ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.


ಇದನ್ನು ತಿಳಿದು ಆ ಜನರು ಸನ್ನಿಧಿಗೆ ಕೂಡಿಬಂದು - ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ ಪಾರಸಿಯರಲ್ಲಿಯೂ ಉಂಟೆಂಬದು ನಿನಗೆ ಗೊತ್ತಿರಲಿ ಎಂದು ಹೇಳಲು ರಾಜನ ಅಪ್ಪಣೆಯಾಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು