ದಾನಿಯೇಲ 6:13 - ಕನ್ನಡ ಸತ್ಯವೇದವು J.V. (BSI)13 ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.