Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:18 - ಕನ್ನಡ ಸತ್ಯವೇದವು J.V. (BSI)

18 ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನಾದ ದಾರ್ಯಾವೆಷನು ಅರಮನೆಗೆ ಹಿಂತಿರುಗಿದನು. ಆ ರಾತ್ರಿ ಅರಸನು ಊಟಮಾಡಲಿಲ್ಲ. ಮನೋರಂಜನೆಗಾಗಿ ಯಾರನ್ನೂ ತನ್ನ ಹತ್ತಿರ ಬರಗೊಡಿಸಲಿಲ್ಲ. ಇಡೀ ರಾತ್ರಿ ಅವನಿಗೆ ನಿದ್ರೆಯೇ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:18
16 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ


ನಾನು ರೆಪ್ಪೆಗಳನ್ನು ಹಚ್ಚದಂತೆ ಮಾಡಿದಿ. ತಳಮಳಗೊಂಡು ಮಾತಾಡಲಾರದೆ ಇದ್ದೆನು.


ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.


ಮತ್ತು ಬೆಳ್ಳಿ ಬಂಗಾರಗಳನ್ನೂ ಅರಸರ ನಜರನ್ನೂ ದಿಗ್ದೇಶಗಳಿಂದ ಕಪ್ಪವನ್ನೂ ಸಂಗ್ರಹಿಸಿಕೊಂಡೆನು; ಗಾಯಕಗಾಯಕಿಯರನ್ನೂ ಮನುಷ್ಯರಿಗೆ ಭೋಗ್ಯರಾದ ಅನೇಕ ಉಪಪತ್ನಿಯರನ್ನೂ ಸಂಪಾದಿಸಿಕೊಂಡೆನು.


ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.


ಅವರು ದಮ್ಮಡಿಕಿನ್ನರಿಗಳೊಡನೆ ಸ್ವರವೆತ್ತಿ ಕೊಳಲಿನ ಧ್ವನಿಗೆ ಉಲ್ಲಾಸಪಡುವರು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,


ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.


ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.


ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲು ಮುಚ್ಚಿ ನನ್ನ ಪ್ರಾಣವನ್ನು ಕಳೆದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು