ದಾನಿಯೇಲ 6:2 - ಕನ್ನಡ ಸತ್ಯವೇದವು J.V. (BSI)2 ರಾಜನಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇವಿುಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿ |
ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.