Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:23 - ಕನ್ನಡ ಸತ್ಯವೇದವು J.V. (BSI)

23 ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:23
18 ತಿಳಿವುಗಳ ಹೋಲಿಕೆ  

ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು - ಈ ಮಹಾಜನಾಂಗವನ್ನು ಆಳುವದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ ಎಂದು ನುಡಿದನು.


ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ -


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು