Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:26 - ಕನ್ನಡ ಸತ್ಯವೇದವು J.V. (BSI)

26 ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:26
39 ತಿಳಿವುಗಳ ಹೋಲಿಕೆ  

ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಮತ್ತು ಯಾವ ಸ್ಥಳದಲ್ಲಿ - ನೀವು ನನ್ನ ಜನರಲ್ಲವೆಂದು ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ಜೀವವುಳ್ಳ ದೇವರ ಪುತ್ರರು ಎನಿಸಿಕೊಳ್ಳುವರು ಎಂಬದು.


ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಯೆಹೋವನು ಸದಾಕಾಲವೂ ಅರಸನಾಗಿರುವನು; ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು. ಯಾಹುವಿಗೆ ಸ್ತೋತ್ರ!


ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ನೀವು ಯಾರಿಗೆ ಹೆದರಬೇಕೋ ನಿಮಗೆ ತಿಳಿಸುತ್ತೇನೆ; ಕೊಂದ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳವನಿಗೆ ಹೆದರಬೇಕು; ಹೌದು, ಆತನಿಗೇ ಹೆದರಬೇಕೆಂದು ನಿಮಗೆ ಹೇಳುತ್ತೇನೆ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.


ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು