5 ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.
ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.
ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.