ದಾನಿಯೇಲ 6:8 - ಕನ್ನಡ ಸತ್ಯವೇದವು J.V. (BSI)8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿ |
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.