ದಾನಿಯೇಲ 7:1 - ಕನ್ನಡ ಸತ್ಯವೇದವು J.V. (BSI)1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.