ದಾನಿಯೇಲ 7:10 - ಕನ್ನಡ ಸತ್ಯವೇದವು J.V. (BSI)10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು. ಅಧ್ಯಾಯವನ್ನು ನೋಡಿ |