Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:13 - ಕನ್ನಡ ಸತ್ಯವೇದವು J.V. (BSI)

13 ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:13
39 ತಿಳಿವುಗಳ ಹೋಲಿಕೆ  

ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.


ನಾನು ನೋಡಲಾಗಿ ಇಗೋ, ಪ್ರಕಾಶಮಾನವಾದ ಒಂದು ಮೇಘವು ನನಗೆ ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದವನೊಬ್ಬನು ಕೂತಿರುವದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹದವಾದ ಕುಡುಗೋಲೂ ಇದ್ದವು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಅಗೋ, ಆಕಾಶವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವದನ್ನೂ ನೋಡುತ್ತೇನೆ ಎಂದು ಹೇಳಿದನು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.


ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು - ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾ ಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.


ವಿುಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು, ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ ಅವುಗಳ ಜೀವವನ್ನು ಉಳಿಸಿದರು.


ದಾನಿಯೇಲನಾದ ನಾನು ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು