Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:14 - ಕನ್ನಡ ಸತ್ಯವೇದವು J.V. (BSI)

14 ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:14
41 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಆಗ ಸಾರುವವನು ಗಟ್ಟಿಯಾಗಿ ಕೂಗಿ - ವಿವಿಧ ಜನಾಂಗ ಕುಲಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ -


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ಯೆಹೋವನು ಸದಾಕಾಲವೂ ಅರಸನಾಗಿರುವನು; ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು. ಯಾಹುವಿಗೆ ಸ್ತೋತ್ರ!


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.


ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ;


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು