19 ಆಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರು ಉಳ್ಳದ್ದಾಗಿ ಕೆಲವನ್ನು ನುಂಗಿ ಕೆಲವನ್ನು ಚೂರುಚೂರುಮಾಡಿ ವಿುಕ್ಕದ್ದನ್ನು ಕಾಲುಗಳಿಂದ ತುಳಿದು ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾದ
19 ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
19 ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ.
19 “ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು.
19 “ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ.
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.
ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.