ದಾನಿಯೇಲ 7:2 - ಕನ್ನಡ ಸತ್ಯವೇದವು J.V. (BSI)2 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು - ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾ ಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.