ದಾನಿಯೇಲ 7:20 - ಕನ್ನಡ ಸತ್ಯವೇದವು J.V. (BSI)20 ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.