Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:27 - ಕನ್ನಡ ಸತ್ಯವೇದವು J.V. (BSI)

27 ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:27
29 ತಿಳಿವುಗಳ ಹೋಲಿಕೆ  

ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿ.


ತರುವಾಯ ದಂಡದಂತಿದ್ದ ಒಂದು ಅಳತೇ ಕೋಲು ನನ್ನ ಕೈಗೆ ಕೊಡಲ್ಪಟ್ಟಿತು. ಮತ್ತು ಒಂದು ವಾಣಿ ಉಂಟಾಯಿತು; ಅದು ನನಗೆ ಹೇಳಿದ್ದೇನಂದರೆ - ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಲೆಕ್ಕಿಸು.


ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು