ದಾನಿಯೇಲ 7:5 - ಕನ್ನಡ ಸತ್ಯವೇದವು J.V. (BSI)5 ಆಹಾ, ಇನ್ನೊಂದು ಮೃಗ, ಎರಡನೇದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು, ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬಹು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |