Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:6 - ಕನ್ನಡ ಸತ್ಯವೇದವು J.V. (BSI)

6 ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಈ ಮೃಗವು ಚಿರತೆಯ ಹಾಗೆ ಕಾಣಿಸಿತು. ಆ ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ಈ ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಈ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:6
10 ತಿಳಿವುಗಳ ಹೋಲಿಕೆ  

ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು;


ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್‍ರಾಜ್ಯದ ದಿವ್ಯಪಾಲಕನು ಎದುರುಬೀಳುವನು.


ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು.


ನೀನೇ ಆ ಬಂಗಾರದ ತಲೆ. ನಿನ್ನ ಕಾಲವಾದ ಮೇಲೆ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯವುಂಟಾಗುವದು; ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;


ಆಹಾ, ಇನ್ನೊಂದು ಮೃಗ, ಎರಡನೇದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು, ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬಹು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು