ದಾನಿಯೇಲ 8:8 - ಕನ್ನಡ ಸತ್ಯವೇದವು J.V. (BSI)8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು; ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.