Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:1 - ಕನ್ನಡ ಸತ್ಯವೇದವು J.V. (BSI)

1 ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:1
9 ತಿಳಿವುಗಳ ಹೋಲಿಕೆ  

ಮೇದ್ಯಯನಾದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲ ಕೊಟ್ಟು ಆಶ್ರಯನಾಗಿ ನಿಂತೆನು.


ಮೇದ್ಯಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.


ದಾನಿಯೇಲನು ರಾಜನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.


ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳಿಕೆಯಲ್ಲಿಯೂ ಘನವಂತನಾಗಿ ಬಾಳಿದನು.


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು