Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:11 - ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:11
30 ತಿಳಿವುಗಳ ಹೋಲಿಕೆ  

ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು.


ಯೆಹೋವನು ಹೀಗನ್ನುತ್ತಾನೆ - ಏಕೆ ನನ್ನೊಡನೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ.


ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆಹೋದದ್ದೂ ಆತನ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು