ದಾನಿಯೇಲ 9:12 - ಕನ್ನಡ ಸತ್ಯವೇದವು J.V. (BSI)12 [ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ. ಅಧ್ಯಾಯವನ್ನು ನೋಡಿ |