Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:15 - ಕನ್ನಡ ಸತ್ಯವೇದವು J.V. (BSI)

15 ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನಕೃತ್ಯಗಳನ್ನು ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:15
30 ತಿಳಿವುಗಳ ಹೋಲಿಕೆ  

ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ನಾನು ಫರೋಹನಲ್ಲಿಯೂ ಅವನ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಹೊಂದಿದ ನಂತರ ನಾನು ಯೆಹೋವನು ಎಂಬದನ್ನು ಐಗುಪ್ತ್ಯರು ತಿಳುಕೊಳ್ಳುವರು ಅಂದನು.


ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು


ಪತ್ರಕ್ಕೆ ರುಜು ಹಾಕಿ ಮುಚ್ಚಿ [ಮುಚ್ಚಳಕ್ಕೆ] ಸಾಕ್ಷಿಗಳನ್ನು ಹಾಕಿಸಿ ತ್ರಾಸಿನಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನಿನ್ನ ಸ್ವಕೀಯ ಜನರಾಗಿದ್ದಾರೆಂಬದನ್ನು ನೆನಸಿ ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷವಿುಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆ ಹುಟ್ಟಿಸು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಅವರು ಐಗುಪ್ತದೇಶವನ್ನು ಬಿಟ್ಟು ಬಂದ ಪಿತೃಗಳ ಕಾಲ ಮೊದಲುಗೊಂಡು ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ ಎಂದು ಹೇಳಿಸಿದನು.


ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು


ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.


ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡಿಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು