Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:16 - ಕನ್ನಡ ಸತ್ಯವೇದವು J.V. (BSI)

16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:16
33 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.


ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ


ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು.


ನೀತಿಸ್ಥಾಪಕನಾದ ನೀನು ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇವಿುನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲ್ಯರೂ ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿಸತ್ಯತೆಗಳಿಗನುಸಾರವಾಗಿ ಸದುತ್ತರವನ್ನು ದಯಪಾಲಿಸು.


ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪ ರೋಷಗಳಿಗೆ ಆಸ್ಪದವಾಗಿದೆ.


ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.


ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವದನ್ನೂ ಜ್ಞಾಪಿಸಿಕೋ.


ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು