Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:18 - ಕನ್ನಡ ಸತ್ಯವೇದವು J.V. (BSI)

18 ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:18
24 ತಿಳಿವುಗಳ ಹೋಲಿಕೆ  

ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ ಎಂದು ಅರಿಕೆಮಾಡಿದನು.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?


ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ಹೀಗೆ ಅವರು ಇಸ್ರಾಯೇಲ್ಯರ ಮೇಲೆ ನನ್ನ ಹೆಸರನ್ನು ಉಚ್ಚರಿಸಲಾಗಿ ನಾನು ಅವರನ್ನು ಆಶೀರ್ವದಿಸುವೆನು.


ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು