Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:19 - ಕನ್ನಡ ಸತ್ಯವೇದವು J.V. (BSI)

19 ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:19
32 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.


ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಹೀಗೆ ಅವರು ಇಸ್ರಾಯೇಲ್ಯರ ಮೇಲೆ ನನ್ನ ಹೆಸರನ್ನು ಉಚ್ಚರಿಸಲಾಗಿ ನಾನು ಅವರನ್ನು ಆಶೀರ್ವದಿಸುವೆನು.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು