Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:2 - ಕನ್ನಡ ಸತ್ಯವೇದವು J.V. (BSI)

2 ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:2
32 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.


ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು.


ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿಹೋಗಿದೆ.


ನಾನು ಬರುವ ತನಕ ವೇದಪಾರಾಯಣವನ್ನೂ ಪ್ರಸಂಗವನ್ನೂ ಉಪದೇಶವನ್ನೂ ಮಾಡುವದರಲ್ಲಿ ಆಸಕ್ತನಾಗಿರು.


ಕಂಚುಕಿಯು ಈ ವಚನವನ್ನು ಕುರಿತು - ಪ್ರವಾದಿಯು ಇದನ್ನು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.


ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು


ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು