Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:20 - ಕನ್ನಡ ಸತ್ಯವೇದವು J.V. (BSI)

20 ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:20
24 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು.


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು.


ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.


ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು