Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:22 - ಕನ್ನಡ ಸತ್ಯವೇದವು J.V. (BSI)

22 ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:22
12 ತಿಳಿವುಗಳ ಹೋಲಿಕೆ  

(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.


ಆಗ - ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು ಎಂದು ಮನುಷ್ಯಧ್ವನಿಯಂಥ ಒಂದು ವಾಣಿಯು ಊಲಾಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.


ನನಗೆ [ಕನಸಿನ ಅರ್ಥವನ್ನು] ವಿವರಿಸುವ ದೇವದೂತನನ್ನು - ಸ್ವಾಮೀ, ಇವರು ಯಾರು ಎಂದು ನಾನು ಕೇಳಲು ಅವನು ನನಗೆ - ಇವರು ಇಂಥವರೆಂದು ನಿನಗೆ ತೋರಿಸುವೆನು ಎಂಬದಾಗಿ ಹೇಳಿದನು.


ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ.


ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.


ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು